ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ ಸಚಿವ!!

ಮುಂಬೈ: 

      ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಅರವಿಂದ್‌ ಸಾವಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

      ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಸರ್ಕಾರ ರಚನೆ ತಿಕ್ಕಾಟ ತಾರಕಕ್ಕೇರಿರುವಂತೆಯೇ ಶಿವಸೇನಾ ಸಂಸದ ಅರವಿಂದ ಸಾವಂತ್ ಅವರ ರಾಜೀನಾಮೆ ವಿಷಯ ಕುತುಹೂಲ ಕೆರಳಿಸಿದೆ.

      ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಶಿವಸೇನೆ ಸತ್ಯದ ಬದಿಯಲ್ಲಿದೆ. ಅಂತಹ ವಾತಾವರಣದಲ್ಲಿ ನಾನು ಕೇಂದ್ರ ಸರ್ಕಾರದಲ್ಲಿ ಯಾಕೆ ಇರಬೇಕು? ನಾನು ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಟಿ ನಡೆಸುತ್ತೇನೆ’ ಎಂದು ತಿಳಿಸಿದ್ದಾರೆ.

      2019 ರ ಲೋಕಸಭಾ ಚುನಾವಣೆಯ ನಂತರ ಸಾವಂತ್ ಕೇಂದ್ರ ಸರ್ಕಾರದ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಕೈಗಾರಿಕಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 

      ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಶಿವಸೇನೆ ಜೊತೆಗೂಡಿ ಸರ್ಕಾರ ರಚಿಸುವುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. ಆದ್ರೆ ಶಿವಸೇನೆ ಮುಖ್ಯಮಂತ್ರಿ ಹುದ್ದೆಯನ್ನು ಕೇಳಿದೆ, ಇದನ್ನು ಮಹಾರಾಷ್ಟ್ರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ತಿರಸ್ಕರಿಸಿದೆ. 288 ಸದಸ್ಯ ಬಲವಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105 ಮತ್ತು ಶಿವಸೇನೆ 56 ಸ್ಥಾನಗಳನ್ನು ಗೆದ್ದಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap