ಚಂದ್ರಯಾನ-2 : ಕೊನೆಗೂ ‘ವಿಕ್ರಮ್ ಲ್ಯಾಂಡರ್’ ಪತ್ತೆ!!!:

ಬೆಂಗಳೂರು:
      ಚಂದ್ರಯಾನ-2ರ ಮಹತ್ವದ ಘಟ್ಟದಲ್ಲೇ ಹಿನ್ನಡೆ ಅನುಭವಿಸಿದ್ದ ಇಸ್ರೋ, ಕೊನೆಗೂ ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

     ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಲ್ಯಾಂಡಿಂಗ್​ನ ಕೊನೇ ಕ್ಷಣದಲ್ಲಿ ಸಂಪರ್ಕ ಕಡಿತಗೊಂಡು ವಿಜ್ಞಾನಿಗಳು ಸೇರಿದಂತೆ ಕೋಟ್ಯಾಂತರ ಭಾರತೀಯರಿಗೆ ನಿರಾಸೆ ಮೂಡಿಸಿತ್ತು. ಆದರೆ ಚಂದಿರನ ಅಂಗಳದಲ್ಲಿ ಲ್ಯಾಂಡ್ ಆಗಿರುವ ವಿಕ್ರಮ್ ಲ್ಯಾಂಡರ್‌ನ ಚಿತ್ರಗಳು ಇಸ್ರೋಗೆ ಲಭ್ಯವಾಗಿವೆ. ಈ ಸುದ್ದಿಯನ್ನು ಸ್ವತಃ ಇಸ್ರೋ ಮುಖ್ಯಸ್ಥ ಕೆ.ಸಿವನ್ ಸ್ಪಷ್ಟಪಡಿಸಿದ್ದಾರೆ.
 
      ಥರ್ಮಲ್‌ ಇಮೇಜ್‌ ಮೂಲಕ ಲ್ಯಾಂಡರ್‌ ಇರುವ ಸ್ಥಳ ಪತ್ತೆ ಮಾಡಲಾಗಿದ್ದು, ಅದರೊಂದಿಗೆ ಸಂಪರ್ಕ ಸಾಧಿಸುವ ಪ್ರಯತ್ನವನ್ನು ಇಸ್ರೊ ವಿಜ್ಞಾನಿಗಳು ಮುಂದುವರಿಸಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಶೋಧಕ ನೌಕೆಯನ್ನು ಇಳಿಸುವ ಮೊದಲ ಪ್ರಯತ್ನವನ್ನು ಭಾರತ ಮಾಡಿದೆ.
      ಚಂದ್ರನ ಕಕ್ಷೆಯಲ್ಲಿ ಗಿರಕಿ ಹೊಡೆಯುತ್ತಿರುವ ಆರ್ಬಿಟರ್, ವಿಕ್ರಮ್ ಲ್ಯಾಂಡರ್‌ನ ಛಾಯಾಚಿತ್ರಗಳನ್ನು ಬೆಂಗಳೂರಿನ ಇಸ್ರೋ ನಿಯಂತ್ರಣ ಕೊಠಡಿಗೆ ರವಾನಿಸಿದೆ.
      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ