ಸಿದ್ದರಾಮಯ್ಯ ಗೆ ಸಿಬಿಐ ಶಾಕ್ !!?

ಬೆಂಗಳೂರು

       ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ ಪ್ರಕರಣದ ಸಂಬಂಧ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐ ತನಿಖೆ ಗೆ ಒಳಪಡುವ ಪರಿಸ್ಥಿತಿ ಉಂಟಾಗಿದೆ. 

        ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಿ ಮೈಸೂರು ಪೊಲೀಸ್ ಆಯುಕ್ತರಿಗೆ ರಾಜ್ಯ ಪೆಲೀಸ್ ಮಹಾನಿರ್ದೇಶಕಿ ನೀಲಮಣಿರಾಜು( ಡಿಜಿಪಿ) ಅವರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಬಿಐ ತನಿಖೆ ಎದುರಿಬೇಕಾಗಿರುವುದು ಅನಿವಾರ್ಯವಾಗಿದೆ

       ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಗಂಗರಾಜು ಎಂಬವರು ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಕಳೆದ ಜುಲೈ 23 ರಂದು ಮೈಸೂರಿನ ಲಕ್ಷ್ಮೀಪುರಂ ಪೆಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಗಂಗರಾಜು ಡಿಜಿಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟ ಅಭಿಪ್ರಾಯ ಕೇಳಿ ಡಿಜಿಪಿ ಮೈಸೂರು ಪೆಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಏನಿದು ಪ್ರಕರಣ

        ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯ ನಿವಾಸದ ಜಾಗದ ಕುರಿತಾಗಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ನಗರದ ಗಂಗರಾಜು ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೈಸೂರು ನ್ಯಾಯಾಲಯದ ಮೊರೆ ಹೋಗಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದ್ದ ಜಾಗವನ್ನು ಸಿದ್ದರಾಮಯ್ಯ ಪ್ರಭಾವ ಬಳಸಿ ಡಿನೋಟಿಫೈ ಮಾಡಿಸಿದ್ದಾರೆ. ಅದೇ ಜಾಗವನ್ನು ಸಿದ್ದರಾಮಯ್ಯ ಖರೀದಿ ಮಾಡಿ ಮನೆ ಕಟ್ಟಿದ್ದಾರೆ. ಅಷ್ಟೇ ಅಲ್ಲದೇ ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯದೇ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದ್ದಾರೆ ಎಂದು ಗಂಗಾರಾಜು ಆರೋಪ ಮಾಡಿ ದೂರು ನೀಡಿದ್ದರು.

       ದೂರು ನೀಡಿದ ಹಿನ್ನೆಲೆಯಲ್ಲಿ ಮೈಸೂರಿನ ಸಿವಿಲ್ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿತ್ತು. ಇದರ ಅನ್ವಯ ಮೈಸೂರಿನ ಲಕ್ಷ್ಮೀಪುರಂ ಪೆಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಸೇರಿ ನಾಲ್ಕು ಜನರ ವಿರುದ್ಧ 9 ಐಪಿಸಿ ಸೆಕ್ಷನ್ ಗಳಡಿ [ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಸೆಕ್ಷನ್ 468] ಪ್ರಕರಣ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಜೊತೆ ಮುಡಾದ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ ಧೃವಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಸಿ. ಬಸವೇಗೌಡ ಕೂಡ ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link