ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ಸಿಂಧು ಬಿ. ರೂಪೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಂಧು ರೂಪೇಶ್ ಅವರು ಇದುವರೆಗೂ ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿ ಸಿಇಒ ಆಗಿದ್ದರು. ಇದೀಗ ಸಿಂಧೂ ಅವರನ್ನು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಸೆಪ್ಟೆಂಬರ್ 6 ರಂದು ನೇಮಕ ಮಾಡಿದ ಆದೇಶ ಹೊರಬಿದ್ದಿದೆ. ಇನ್ನು ಐಎಎಸ್ ಸೇವೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಿಂಧು ಅವರು ಮೈಸೂರಿನಲ್ಲಿ ಬಿಇ ಪದವೀಧರೆಯಾಗಿದ್ದು, 2011ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ರಾಜ್ಯದ ನಾಗರೀಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ