ದೇಶದಲ್ಲಿ ಒಂದೇ ದಿನ 52,050 ಮಂದಿಗೆ ಕೊರೊನಾ ಸೋಂಕು!!

ನವದೆಹಲಿ :

     ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 52,050 ಮಂದಿಗೆ ಸೋಂಕು ತಗುಲಿದೆ.

     ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಒಂದೇ ದಿನ 52,050 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 18,55,746 ಕ್ಕೆ ಏರಿಕೆಯಾಗಿದೆ.

     ನಿನ್ನೆ ಒಂದೇ ದಿನ ಭಾರತದಲ್ಲಿ 803 ಮಂದಿ ಕೋವಿಡ್-19 ನಿಂದ ಜೀವ ಕಳೆದುಕೊಂಡಿದ್ದಾರೆ. ದೇಶದಲ್ಲಿ ಇಲ್ಲಿಯವರೆಗೂ ಒಟ್ಟು 38,938 ಜನ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 5,86,298 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 12,30,510 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap