ಶೋಪಿಯಾನ್:
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ನಾಡಿಗಾಮ್ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ಕಾಳಗದಲ್ಲಿ ಇನ್ನಿಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆಯ ಪ್ಯಾರಾಟ್ರೂಪರ್ಸ್, ರಾಜ್ಯ ಪೊಲೀಸರು ಮತ್ತು ಸಿಆರ್ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಯೋಧರು ಜತೆಯಾಗಿ ನಸುಕಿನ ಜಾವ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಸೇನಾ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಚಕಮಕಿ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ