ನವದೆಹಲಿ :
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ತಡೆರಹಿತವಾಗಿ ಸಂಚರಿಸಲು ಅನುಕೂಲವಾಗುವಂತೆ ವೇಗ ನಿಯಂತ್ರಕ (ಸ್ಪೀಡ್ ಬ್ರೇಕರ್) ತೆರವುಗೊಳಿಸಲು ಹೆದ್ದಾರಿ ಸಚಿವಾಲಯದ ವತಿಯಿಂದ ಸೂಚನೆ ನೀಡಲಾಗಿದೆ.
ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿರುವುದರಿಂದ ಟೋಲ್ ಪ್ಲಾಜ್ ಗಳ ಬಳಿ ವೇಗ ನಿಯಂತ್ರಕದ ಅಗತ್ಯತೆ ಇರುವುದಿಲ್ಲ. ಹೀಗಾಗಿ ಸ್ಪೀಡ್ ಬ್ರೇಕರ್ ತೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ