ನವದೆಹಲಿ:
ಶ್ರೀಲಂಕಾದಲ್ಲಿ ತಾತ್ಕಾಲಿಕವಾಗಿ ಫೇಸ್ಬುಕ್ ಮತ್ತು ವಾಟ್ಸಪ್ ಸೇರಿದಂತೆ ಕೆಲವು ಸಾಮಾಜಿಕ ಜಾಲತಾಣಗಳನ್ನು ನಿಷೇಧ ಮಾಡಲಾಗಿದೆ.
ಹೌದು, ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಆತ್ಮಹತ್ಯಾ ದಾಳಿ ನಡೆದ ನಂತರ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಪರ ಹಾಗೂ ವಿರೋಧಿ ಪೋಸ್ಟ್ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯುತ್ತಿದೆ. ಪರಿಣಾಮ ಶ್ರೀಲಂಕಾ ದ್ವೀಪ ರಾಷ್ಟ್ರದಲ್ಲಿ ಶಾಂತಿ ಸ್ಥಾಪನೆಗಾಗಿ ಅಲ್ಲಿನ ಸರ್ಕಾರ ಸೋಮವಾರದಿಂದ ಫೇಸ್ಬುಕ್ ಹಾಗೂ ವಾಟ್ಸಾಪ್ ಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಿದೆ.
ಭಾನುವಾರದಂದು ಬಹುಪಾಲು ಕ್ರಿಶ್ಚಿಯನ್ ರೇ ಇರುವ ಪಶ್ಚಿಮ ಕರಾವಳಿಯ ಪಟ್ಟಣ ಚಿಲಾದಲ್ಲಿ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಮೂಲಕ ಪ್ರಾರಂಭವಾದ ವಿವಾದದ ನಂತರ ಹಲವಾರು ಮಸೀದಿಗಳು ಹಾಗೂ ಮುಸ್ಲಿಂ ಅಂಗಡಿ ವ್ಯಾಪಾರಿಗಳ ಮೇಲೆ ಕಲ್ಲು ತೂರಾಟವನ್ನು ನಡೆಸಲಾಯಿತು ಎಂದು ತಿಳಿದುಬಂದಿದೆ.
ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಬರೆದುಕೊಂಡಿರುವ ಅಬ್ದುಲ್ ಹಮೀದ್ ಮೊಹಮದ್ ಹಸ್ಮಾರ್ ಅವರನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಏಪ್ರಿಲ್.21 ರಂದು ಭಾನುವಾರ ಶ್ರೀಲಂಕಾದ ಚರ್ಚ್ ಒಂದರಲ್ಲಿ ಈಸ್ಟರ್ ಭಾನುವಾರದ ಪ್ರಯುಕ್ತ ಕ್ರಿಶ್ಚಿಯನ್ ಸಮುದಾಯದವರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ವೇಳೆ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ ಪರಿಣಾಮ 260ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ನಂತರ ಈ ಆಕ್ರಮಣದ ಹೊಣೆಯನ್ನು ಇಸ್ಲಾಂ ಸ್ಟೇಟ್ ಮುಸ್ಲಿಂ ಉಗ್ರ ಸಂಘಟನೆ ವಹಿಸಿಕೊಂಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ