ಆಂಧ್ರಪ್ರದೇಶ :
ನೆರೆಯ ರಾಜ್ಯಗಳಾದ ತಮಿಳುನಾಡು, ತೆಲಂಗಾಣದಲ್ಲಿ ಕೊರೊನಾ ಅಟ್ಟಹಾಸ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ ಈಗ ಆಂಧ್ರ ಪ್ರದೇಶದಲ್ಲೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
ಈ ಕುರಿತಂತೆ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದರಿಂದ ಕಳೆದ ಮಾರ್ಚ್‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‌ಮೋಹನ್ ರೆಡ್ಡಿ ಸರ್ಕಾರ ಈ ಬಾರಿಯ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ.
ಕರ್ನಾಟಕದಲ್ಲಿ ಸಾಕಷ್ಟು ಪರ ವಿರೋಧಗಳ ಹಿನ್ನಲೆಯಲ್ಲಿ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ