ಬೆಂಗಳೂರು,
ರಾಜ್ಯದ ಮೀನಿಗೆ ಗೋವಾದಲ್ಲಿ ನಿಷೇಧ ಹೇರಿರುವ ಕುರಿತು ಅಲ್ಲಿನ ಸರಕಾರದ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ರಾಜ್ಯದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಪೂರೈಕೆ ಆಗಿರುವ ಮೀನಿನಲ್ಲಿ ಫಾರ್ಮಲಿನ್ ರಾಸಾಯನಿಕ ಅಂಶ ಪತ್ತೆಯಾಗಿರುವ ಕುರಿತು ಖಚಿತ ಪುರಾವೆಗಳಿಲ್ಲ. ಪಾರ್ಮಲಿನ್ ಕಾರಣ ನೀಡಿ ಗೋವಾ ಸರಕಾರ ದಿಢೀರ್ ನಿಷೇಧ ಹೇರಿರುವುದರಿಂದ ರಾಜ್ಯದ ಮೀನುಗಾರರು ಮತ್ತು ವ್ಯಾಪಾರಿಗಳಿಗೆ ತೊಂದರೆ ಆಗಿದೆ. ಗೋವಾ ಮೀನುಗಾರಿಕಾ ಸಚಿವರ ಜತೆ ಚರ್ಚೆನಡೆಸುವಂತೆ ರಾಜ್ಯದ ಮೀನುಗಾರಿಕಾ ಸಚಿವರಿಗೆ ಮನವಿ ಮಾಡಲಾಗಿದೆ. ಸೋಮವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚಿಸಲಾಗುವುದು ಎಂದು ಖಾದರ್ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
