ನವದೆಹಲಿ :
ಸುಪ್ರೀಂ ಕೋರ್ಟ್‌ನ ಹಲವು ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿರುವ ಬೆನ್ನಲ್ಲೇ ಪ್ರಕರಣಗಳ ಭೌತಿಕ ವಿಚಾರಣೆಯನ್ನು ಕೋರ್ಟ್ ಸ್ಥಗಿತಗೊಳಿಸಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧರಿಸಿದ್ದು, ನ್ಯಾಯಮೂರ್ತಿಗಳು ಅವರ ನಿವಾಸದಿಂದಲೇ ವಿಚಾರಣೆ ನಡೆಸಲಿದ್ದಾರೆ. ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಪ್ರಕರಣಗಳ ವಿಚಾರಣೆ ಆರಂಭವಾಗಲಿದ್ದು 10:30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠವು 11:30ಕ್ಕೆ ಕಾರ್ಯಾರಂಭಿಸಲಿದೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೋರ್ಟ್ ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ನಿವಾರ ಕೋರ್ಟ್‌ನ 44 ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿತ್ತು. ಕೋರ್ಟ್ ರೂಮ್ ಗಳು ಸಹಿತ ಸಂಪೂರ್ಣ ನ್ಯಾಯಾಲಯ ಸಂಕೀರ್ಣವನ್ನು ಸ್ಯಾನಿಟೈಸ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ