ನವದೆಹಲಿ :
ನ್ಯಾಯಾಂಗ ನಿಂದನೆಯ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ 40 ಮಿಲಿಯನ್ ಡಾಲರ್ ಹಣವನ್ನು ತನ್ನ ಮಕ್ಕಳಿಗೆ ವರ್ಗಾಯಿಸಿದ್ದಕ್ಕಾಗಿ ಸುಪ್ರೀಂಕೋರ್ಟ್ ವಿಜಯ್ ಮಲ್ಯನನ್ನು ತಪ್ಪಿತಸ್ಥ ಎಂದು ಘೊಷಿಸಿ, ಮೇ 2017ರಲ್ಲಿ ತೀರ್ಪು ನಿಡಿತ್ತು.
ಇದೀಗ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನ್ಯಾಯಪೀಠ, ಈ ತೀರ್ಪು ಪ್ರಕಟಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ