ದೆಹಲಿ :
ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್‌ಗೆ ಸರಕಾರ ರಚಿಸಲು ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನೆ,ಎನ್‌ಸಿಪಿ, ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
ನಾಳೆ ವಿಶ್ವಾಸಮತ ಯಾಚಿಸುವಂತೆ ಕೋರ್ಟ್ ಸೂಚಿಸಿದ್ದು, ನ್ಯಾಯಾಂಗ ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಬಾರದು. ಆದರೆ ಕೆಲ ವಿಷೇಶ ಸಂದರ್ಭಗಳಲ್ಲಿ ನಿಗಾವಹಿಸಬೇಕಾಗುತ್ತದೆ. ಅಧಿಕಾರಗಳ ಮೊಟಕಾದಾಗ ಕೋರ್ಟ್ ಮಧ್ಯಪ್ರವೇಶ ಮಾಡಬೇಕಾಗುತ್ತದೆ ಎಂದಿರುವ ಕೋರ್ಟ್ ನಾಳೆಯೇ ವಿಶ್ವಾಸಮತ ಯಾಚಿಸಲು ನಿರ್ದೇಶಿಸಿದೆ.
Supreme Court orders Floor Test in the Maharashtra assembly to be held on November 27 before 5 pm. The proceedings shall be live telecast. https://t.co/SLrGeF6et1
— ANI (@ANI) November 26, 2019
“ಬಹುಮತ ಸಾಬೀತು ನೇರಪ್ರಸಾರ ಆಗಬೇಕು. ತಲೆಎಣಿಕೆ ಮೂಲಕ ವಿಶ್ವಾಸಮತ ಯಾಚನೆ ನಡೆಯಲಿ. ನಾಳೆ 5 ಗಂಟೆ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು,” ಎಂದು ಕೋರ್ಟ್ ಹೇಳಿದ್ದು, ಈ ಮೂಲಕ ಫಡ್ನವೀಸ್ ಸರ್ಕಾರಕ್ಕೆ 24 ಗಂಟೆ ಡೆಡ್ಲೈನ್ ನೀಡಿದೆ.
24 ಗಂಟೆಯೊಳಗೆ ವಿಶ್ವಾಸ ಮತ ಯಾಚನೆ ಮಾಡಬೇಕೆಂದು ಆದೇಶಿಸಿ ಎಂದು ಕೋರಿ ತ್ರಿಪಕ್ಷಗಳು ಅರ್ಜಿ ಸಲ್ಲಿಸಿದ್ದವು. ನ್ಯಾ. ಎನ್.ವಿ. ರಮಣ, ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಸಂಜೀವ್ ಖನ್ನಾ ಅವರಿರುವ ತ್ರಿಸದಸ್ಯ ಸುಪ್ರೀಂ ನ್ಯಾಯಪೀಠವು ಇಂದು ವಿಚಾರಣೆ ನಡೆಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ