ದೆಹಲಿ :
ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಅಪರಾಧಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ.
2012 ರ ನಿರ್ಭಯ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಕ್ಷಯ್ ಠಾಕೂರ್ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು, ತೀರ್ಪು ಪ್ರಕಟವಾಗಿದೆ.
Supreme Court rejects review petition of Akshay Kumar Singh, one of the convicts in the 2012 Delhi gang-rape case. pic.twitter.com/5fhmZI94bW
— ANI (@ANI) December 18, 2019
ಅಕ್ಷಯ್‍ಕುಮಾರ್ ಸಲ್ಲಿಸಿದ್ದ ಕ್ಷಮಾದಾನ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್‍ನಲ್ಲಿ ಇಂದು ಭಾರೀ ವಾದ-ವಾಗ್ವಾದ ನಡೆಯಿತು. ನ್ಯಾಯಮೂರ್ತಿಗಳಾದ ಆರ್.ಭಾನುಮತಿ, ಎ.ಎಸ್.ಬೋಪಣ್ಣ ಮತ್ತು ಎಸ್.ಅಶೋಕ್ ಭೂಷಣ್ ಅವರನ್ನೊಳಗೊಂಡ ನೂತನ ತ್ರಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.
ಅಕ್ಷಯ್ ಪರ ವಾದ ಮಂಡಿಸಿದ ವಕೀಲ ಎ.ಪಿ.ಸಿಂಗ್, ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್ ಮುಗ್ದ ಹಾಗೂ ಬಡವ- ಗಲ್ಲುಶಿಕ್ಷೆ ಅಪರಾಧಿಯನ್ನು ಕೊಲ್ಲುತ್ತದೆಯೇ ಹೊರತು ಅಪರಾಧವನ್ನಲ್ಲ. ಹೀಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕು ಎಂದು ವಾದಿಸಿದರು. ಆದರೆ ತೀರ್ಪು ಪ್ರಕಟಿಸಿದ ಕೋರ್ಟ್, ಗಲ್ಲು ಶಿಕ್ಷೆ ತೀರ್ಪನ್ನೇ ಮತ್ತೆ ಎತ್ತಿಹಿಡಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ