ನವದೆಹಲಿ :
ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಎಚ್.ಡಿ.ಐಎಲ್ ನಿರ್ದೇಶಕರಗಳನ್ನು ಜೈಲಿನಿಂದ ಸ್ಥಳಾಂತರಕ್ಕೆ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಇಂದು ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜೈಲಿನಿಂದ ಆರೋಪಿಗಳ ಸ್ಥಳಾಂತರಕ್ಕೆ ತಡೆಯಾಜ್ಞೆ ನೀಡಿದೆ.
ಇತ್ತೀಚೆಗೆ ಪಿಎಂಸಿ ಬ್ಯಾಂಕ್ ಹಗರಣ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಚ್ಡಿಐಎಲ್ ನಿರ್ದೇಶಕರಾದ ಸರಾಂಗ್ ಮತ್ತು ರಾಕೇಶ್ ವಾಧವನ್ರನ್ನು ಜೈಲಿನಿಂದ ಮನೆಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಪಿಎಂಸಿ ಬ್ಯಾಂಕ್ ಹಗರಣ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಅಸಾಮಾನ್ಯ ಆದೇಶ ನೀಡಿದೆ. ಅಪ್ಪ ಮತ್ತು ಮಗ ಪೊಲೀಸರ ವಶದಲ್ಲಿದ್ದಾರೆ.
ಈಗ ಬಾಂಬೆ ಹೈಕೋರ್ಟ್ ಆದೇಶದಂತೆ ಇಬ್ಬರನ್ನೂ ಸ್ಥಳಾಂತರ ಮಾಡಿದರೆ ಜಾಮೀನು ನೀಡಿದಂತಾಗುತ್ತದೆ ಎಂದು ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಹಾಗಾಗಿಯೇ ಸುಪ್ರೀಂಕೋರ್ಟ್ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ