ಇಸ್ಲಾಮಾಬಾದ್:
ಭಾರತದ ವಾಯ ಸೇನೆಯ ದಾಳಿಯಿಂದ ಯಾವುದೇ ಹಾನಿಯಾಗಿಲ್ಲ. ಭಾರತದ ಯುದ್ಧ ವಿಮಾನಗಳು ನಮ್ಮಿಂದ ತಪ್ಪಿಸಿಕೊಳ್ಳುವ ತರಾತುರಿಯಲ್ಲಿ ಖಾಲಿ ಜಾಗದಲ್ಲಿ ಬಾಂಬ್ ಹಾಕಿದೆ ಎಂದು ಪಾಕಿಸ್ತಾನದ ಮೇಜರ್ ಜನರಲ್ ಆಸೀಪ್ ಗಫೂರ್ ಟ್ವೀಟ್ ಮಾಡುವ ಮೂಲಕ ಮೊಂಡುತನ ಪ್ರದರ್ಶನ ಮಾಡಿದ್ದಾರೆ.
ಭಾರತೀಯ ವಾಯು ಸೇನೆ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ದಾಳಿ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಭಾರತೀಯ ವಾಯುಪಡೆಯು ವಿಮಾನಗಳು ಗಡಿನಿಯಂತ್ರಣ ರೇಖೆಯನ್ನು ದಾಟಿದ್ದು, ಪಾಕಿಸ್ತಾನ ಕೂಡಲೇ ಎಚ್ಚರಿಕೆ ನೀಡಿದೆ ಎಂದು ಹೇಳಿದೆ.
Payload of hastily escaping Indian aircrafts fell in open. pic.twitter.com/8drYtNGMsm
— Maj Gen Asif Ghafoor (@OfficialDGISPR) February 26, 2019
ಭಾರತೀಯ ವಾಯುಪಡೆಯ ವಿಮಾನಗಳು ಭಾರತ – ಪಾಕ್‌ನ ಗಡಿ ನಿಯಂತ್ರಣ ರೇಖೆಯನ್ನು ದಾಟಿವೆ. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನ ವಾಯುಪಡೆಯು ಎಚ್ಚರಿಕೆಯನ್ನು ನೀಡಿದೆ. ಇದರಿಂದಾಗಿ ಭಾರತೀಯ ಯುದ್ಧ ವಿಮಾನಗಳು ಈಗ ವಾಪಸ್ ಹೋಗಿವೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಮೇಜರ್ ಜನರಲ್ ಆಸೀಫ್ ಗಫೂರ್ ಟ್ವೀಟ್ ಮಾಡಿದ್ದಾರೆ.
Indian aircrafts’ intrusion across LOC in Muzafarabad Sector within AJ&K was 3-4 miles.Under forced hasty withdrawal aircrafts released payload which had free fall in open area. No infrastructure got hit, no casualties. Technical details and other important information to follow.
— Maj Gen Asif Ghafoor (@OfficialDGISPR) February 26, 2019
ಬಳಿಕ ಮತ್ತೊಂದು ಟ್ವೀಟ್ ಮಾಡಿರುವ ಆಸಿಫ್ ಗಫೂರ್, ಮುಜಾಫರ್‌ನಗರ ಸೆಕ್ಟರ್‌ನಿಂದ ಭಾರತೀಯ ವಾಯುಪಡೆಯು ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿವೆ. ಪಾಕಿಸ್ತಾನ ಸೇನೆಯು ಕೂಡ ಸಕಾಲಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ. ಸದ್ಯ ಯಾವುದೇ ಸಾವು ನೋವು, ಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ