ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ!!

ದೆಹಲಿ :

      ನಿನ್ನೆ ರಾತ್ರಿ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಹಿರಿಯ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ (67) ರವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

      ಸಕಲ ಸರ್ಕಾರಿ ಗೌರವದೊಂದಿಗೆ ಜನಪತ್​ನ ಲೋಧಿ ರೋಡ್​ನಲ್ಲಿರುವ ವಿದ್ಯುತ್​ ಚಿತಾಗಾರದಲ್ಲಿ ಸುಷ್ಮಾ ಅವರ ಅಂತ್ಯಸಂಸ್ಕಾರ ನೆರವೇರಿತು.

      ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಭೂತಾನ್​ ಮಾಜಿ ಪ್ರಧಾನಿ ಶೆರಿಂಗ್​​​ ತೋಬ್ಗೇ, ಬಿಜೆಪಿ ಮುಖಂಡ ಎಲ್​​.ಕೆ. ಅಡ್ವಾಣಿ, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಮುಂತಾದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link