ದೆಹಲಿ :
ಬಿಜೆಪಿ ಹಿರಿಯ ನಾಯಕಿ, ವಿದೇಶಾಂಗ ಖಾತೆ ಮಾಜಿ ಸಚಿವೆ, ದೆಹಲಿಯ ಮಾಜಿ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್ (67) ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಯು ಮಧ್ಯಾಹ್ನ ನಡೆಯಲಿದೆ ಎಂದು ತಿಳಿದುಬಂದಿದೆ.
ನಿನ್ನೆ ತಡರಾತ್ರಿ ನಿಧನರಾದ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿದೆ. ಇಂದು ಅವರ ಪಾರ್ಥಿವ ಶರೀರವನ್ನು ಮಧ್ಯಾನ 12ರಿಂದ 3 ಗಂಟೆಯವರೆಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇರಿಸಿ, ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
“ಸುಷ್ಮಾ ಸಾವು ಪಕ್ಷ ಹಾಗೂ ದೇಶಕ್ಕೆ ತುಂಬಲಾರದ ನಷ್ಟ. ಆ ಸ್ಥಾನವನ್ನು ಯಾರೂ ತುಂಬಲಾರರು” ಎಂದು ನಡ್ಡಾ ಕಂಬನಿ ಮಿಡಿದಿದ್ದಾರೆ.
ಮಧ್ಯಾನ 3 ಗಂಟೆಯ ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಲೋಧಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ವಿಧಿಗಳು ನೆರವೇರಲಿವೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ