ಚೆನ್ನೈ :
ಕಾಲೇಜೊಂದರ ವಿದ್ಯಾರ್ಥಿನಿಯರು ಮದ್ಯಪಾನ ಮಾಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.
ನಾಲ್ವರು ವಿದ್ಯಾರ್ಥಿನಿಯರು ತಮ್ಮ ಸ್ನೇಹಿತೆಯ ಹುಟ್ಟು ಹಬ್ಬದ ದಿನ ಕಾಲೇಜು ಸಮವಸ್ತ್ರ ಧರಿಸಿ ಮದ್ಯಪಾನ ಮಾಡಿದ್ದರು. ಆದರೆ, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿತ್ತು.
ಈ ರೀತಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಈ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರೇ ಅವರಿಗೆ ನ್ಯಾಯ ಒದಗಿಸಬೇಕು. ನಮ್ಮ ಶಿಕ್ಷಣ ಸಂಸ್ಥೆಯ ಘನತೆಗೆ ಚ್ಯುತಿ ಬರುವ ಕಾರಣದಿಂದ ಈ ಕಠಿಣ ನಿರ್ಧಾರಕ್ಕೆ ಬರಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಮದ್ಯಪಾನ ಮಾಡುತ್ತಿರುವ ವಿದ್ಯಾರ್ಥಿನಿಯ ವಿರುದ್ಧ ಅನೇಕರು ಕಮೆಂಟ್ ಮಾಡಿದ್ದು, ಇದು ನಾಚಿಕೆಗೇಡಿನ ಕೆಲಸ ಎಂದು ಕುಟಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
