ನವದೆಹಲಿ :
ರಾಜ್ಯದ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆ ತೆಗೆದಿದ್ದು, ಈ ಯೋಜನೆಗೆ ಒಪ್ಪಿಗೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿದ್ದಾರೆ.
ಆಣೆಕಟ್ಟು ನಿರ್ಮಾಣದಿಂದ ತಮಿಳುನಾಡು ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ಪಳನಿಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಯೋಜನೆಗೆ ಅನುಮತಿ ಪಡೆಯುವ ಸಲುವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಸಚಿವ ರೇವಣ್ಣ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ