ಹೈದರಾಬಾದ್ :
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಮಾಜಿ ಸಚಿವ ನಾರಾ ಲೋಕೇಶ್ರನ್ನು ಪೊಲೀಸರು ಗೃಹ ಬಂಧನಕ್ಕೆ ತಳ್ಳಿದ್ದಾರೆ.
ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ವೈ.ಎಸ್.ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಟಿಡಿಪಿ ಪ್ರತಿಭಟನೆ ನಡೆಸಲು ಯೋಜಿಸಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ) ಹಲವಾರು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎನ್ನಲಾಗಿದೆ.
![](https://prajapragathi.com/wp-content/uploads/2019/09/11.9.19.gif)