ಹೈದರಾಬಾದ್:
ಹೈದರಾಬಾದ್ ದಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಾಲ್ವರು ಆರೋಪಿಗಳ ಮೃತದೇಹಗಳನ್ನು ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೈದರಾಬಾದ್ ಪೊಲೀಸರಿಗೆ ತೆಲಂಗಾಣ ಹೈಕೋರ್ಟ್ ಶನಿವಾರ ಆದೇಶ ಮಾಡಿದೆ.
ಮರಣೋತ್ತರ ಪರೀಕ್ಷೆಯನ್ನು ಡಿ 23 ರ ಸೋಮವಾರ ಸಂಜೆ 5 ಗಂಟೆಯ ಒಳಗೆ ಮುಗಿಸಿ, ವರದಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೆ ಅದಕ್ಕಾಗಿ ನವದೆಹಲಿಯ ಏಮ್ಸ್ ನ ಮೂವರು ಹಿರಿಯ ವೈದ್ಯರ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ನ್ಯಾಯಾಲಯ ತೆಲಂಗಾಣ ರಾಜ್ಯ ಪ್ರಧಾನ ಕಾರ್ಯದರ್ಶಿ,ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಗೆ ಸೂಚಿಸಿದೆ.
ನವೆಂಬರ್ 27 ರ ರಾತ್ರಿ ನಗರದ ಹೊರವಲಯದಲ್ಲಿ ಹೈದರಾಬಾದ್ ಪಶುವೈದ್ಯರೊಬ್ಬರ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಆರೋಪದಡಿ ಈ ಎನ್‌ಕೌಂಟರ್ ನಡೆದಿತ್ತು. ಇದೊಂದು ನಕಲಿ ಎನ್‌ಕೌಂಟರ್ ಎಂದು ಮಾನವ ಹಕ್ಕು ಸಂಘಟನೆಗಳು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ