ಜ.7ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು!!

ನವದೆಹಲಿ:

      ದಿನದಿಂದ ದಿನಕ್ಕೆ ರೂಪಾಂತರ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 7 ರವರೆಗೆ ವಿಸ್ತರಿಸಲಾಗಿದೆ.

     ಬ್ರಿಟನ್ ನಲ್ಲಿ ರೂಪಾಂತರ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳಿಗೆ ಡಿಸೆಂಬರ್ 22ರಿಂದ ಡಿಸೆಂಬರ್ 31ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ನಿರ್ಬಂಧ ವಿಸ್ತರಿಸಲಾಗಿದೆ.

      ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ‘ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು 2021ರ ಜನವರಿ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ’ ಎಂದು ತಿಳಿಸಿದೆ.

      ಬ್ರಿಟನ್ -ಭಾರತದ ನಡುವಿನ ವಿಮಾನಗಳ ರದ್ದತಿ ಅವಧಿಯನ್ನು ಇನ್ನಷ್ಟು ವಿಸ್ತರಿಸಲಾಗುವುದು. ಆದರೆ ಇದು ದೀರ್ಘವಾಗಿರುವುದಿಲ್ಲ. ಇನ್ನು ಎರಡು ದಿನಗಳಲ್ಲಿ, ಈ ರೂಪಾಂತರ ಸೋಂಕಿನ ಕುರಿತು ಒಂದು ಚಿತ್ರಣ ಸಿಗುತ್ತಿದ್ದಂತೆ, ಏನೇನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತೀರ್ಮಾನಿಸಲಾಗುತ್ತದೆ. ಈ ತಾತ್ಕಾಲಿಕ ರದ್ದತಿಯನ್ನು ಯಾವಾಗ ಹಿಂಪಡೆಯಬಹುದು ಎಂಬ ಕುರಿತು ನಿರ್ಧರಿಸಲಾಗುತ್ತದೆ ಎಂದು ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap