ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್​ಐ ಹತ್ಯೆ!!

ಶ್ರೀನಗರ : 

     ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್​ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ.

     ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಭಟ್ ಬಲಿಯಾಗಿದ್ದಾರೆ.

      ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಆಗುತ್ತಿದ್ದಾಗ ಉಗ್ರರು ಪೊಲೀಸ್ ಇನ್ಸ್ ಪೆಕ್ಟರ್ ಅಶ್ರಫ್ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಬಿಜ್ ಬೆಹರಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅಶ್ರಫ್ ಮೃತಪಟ್ಟಿದ್ದಾರೆ.

      ಇದಾಗಿ ಒಂದು ಗಂಟೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಕೊಂದು, ಓರ್ವನನ್ನು ಸೆರೆ ಹಿಡಿದಿವೆ. ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap