ತಿರುವನಂತಪುರಂ:
ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ.
ಶಬರಿ ಮಲೆ : ಮಹಿಳೆಯರ ಪ್ರವೇಶಕ್ಕೆ ಅಸ್ತು ಎಂದ ಸುಪ್ರೀಂ..!
ಅಕ್ಟೋಬರ್ 1 ರಂದು 12 ಗಂಟೆಗಳ ಕಾಲ ಕೇರಳ ರಾಜ್ಯದಾದ್ಯಂತ ಬಂದ್ ಗೆ ಕರೆನೀಡಲಾಗಿದ್ದು, ತೀರ್ಪನ್ನು ವಿರೋಧಿಸುವ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದ.
ಪ್ರಾರ್ಥನೆಗೆ ಯಾವುದೇ ತಾರತಮ್ಯ ಇರಬಾರದು. ಶರೀರದ ಆಧಾರದ ಮೇಲೆ ತಾರತಮ್ಯ ಮಾಡಬಾರದು. ಮಹಿಳೆಯರು ತಮ್ಮ ಹಕ್ಕಿಗಾಗಿಹೋರಾಡಿದ್ದಾರೆ. ಅವರನ್ನು ತಾರತಮ್ಯದಿಂದ ನೋಡಲಾಗುತ್ತಿದೆ. ಹಾಗಾಗಿ ಅವರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.
ತೀರ್ಪಿಗೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಯನ್ನು ದೇವಾಲಯದ ಆಡಳಿತ ಮಂಡಳಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ