ಶ್ರೀನಗರ :
ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಎನ್ಕೌಂಟರ್ ನಡೆದಿದ್ದು, ಮೂವರು ಭಯೋತ್ಪಾದಕರನ್ನು ಸೇನೆ ಕೊಂದು ಹಾಕಿದೆ.
ಸೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದ ಮನೆಯೊಂದರಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ದಾಳಿಗೆ ಸಜ್ಜಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್‍ಪಿಎಫ್ ಮತ್ತು ಪೊಲೀಸರು ನಿನ್ನೆ ರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದು ಬೇಟೆ ಕಾರ್ಯಾಚರಣೆ ನಡೆಸುತ್ತಿದ್ದರು.
ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದವು. ಆಗ ನಡೆದ ಸುದೀರ್ಘ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಹತರಾದರು.
ಮೃತಪಟ್ಟ ಆತಂಕವಾದಿಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರನ್ನು ಶೋಧಿಸುವ ಕಾರ್ಯ ಮುಂದುವರೆಯುತ್ತಿದೆ ಎಂದು ಶ್ರೀನಗರದಲ್ಲಿರುವ ಸೇನೆಯ ಸಾರ್ವಜನಿಕರ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ