ಶ್ರೀನಗರ :
ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಭಾರತೀಯ ಸೇನೆಯ ದಾಳಿಗೆ ಮತ್ತೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಎನ್‌ಕೌಂಟರ್‌ಗೆ ಬಲಿಯಾದ ಉಗ್ರರನ್ನು ಶೋಪಿಯಾನದ ಜೈನಪೋರಾ ಗ್ರಾಮದ ಅದಿಲ್ ಶೇಖ್, ವಾಸೀಂ ವಾನಿ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ 55 ಮತ್ತು ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್ ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿತ್ತು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ವಾಚಿ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಇಂದು ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಹತ್ಯೆಯಾದ ಉಗ್ರರು ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
