ಜಮ್ಮು ಕಾಶ್ಮೀರ:
ಟ್ರಕ್‌ನಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರ ಮೇಲೆ ಪೊಲೀಸರ ತಂಡ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಹೋಗುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಹೆದ್ದಾರಿಯಲ್ಲಿ ಟ್ರಕ್ ಒಂದನ್ನು ತಪಾಸಣೆಗೆಂದು ಪೊಲೀಸರು ತಡೆದಿದ್ದರು. ಈ ವೇಳೆ ಉಗ್ರರು ಪೊಲೀಸರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಬಳಿಕ ಪೊಲೀಸರು ಟ್ರಕ್‌ನಲ್ಲಿದ್ದ ಮೂವರು ಉಗ್ರರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಘಟನೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಟ್ರಕ್‌ನಲ್ಲಿ 3-4 ಉಗ್ರರು ಪ್ರಯಾಣಿಸುತ್ತಿದ್ದರು. ಪೊಲೀಸರು ಪ್ರತಿದಾಳಿ ನಡೆಸಿದಾಗ 3 ಉಗ್ರರು ಹತರಾಗಿದ್ದು, ಇನ್ನೊಬ್ಬ ಉಗ್ರ ಪಕ್ಕದ ಅರಣ್ಯ ಪ್ರದೇಶಕ್ಕೆ ಓಡಿ ಹೋಗಿ ಪರಾರಿಯಾಗಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ