ಶ್ರೀನಗರ:
ಕಣಿವೆ ರಾಜ್ಯದ ಪುಲ್ವಾಮಾ ಜಿಲ್ಲೆಯಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿರುವಾಗ, ಅಲ್ಲಿ ಅಡಗಿದ್ದ ಉಗ್ರರು ಗುಂಡು ಹಾರಿಸಿದರು. ಪ್ರತಿಯಾಗಿ “ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡವು. ಸುಮಾರು ಹತ್ತು ನಿಮಿಷಗಳ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಹತ್ತಿರದ ಮನೆಗಳಲ್ಲಿನ ಎಲ್ಲಾ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.
#UPDATE One more terrorist neutralised in Operation Chewa, Pulwama; total 2 terrorists neutralised till now: Indian Army https://t.co/rMQhtInWvf
— ANI (@ANI) June 26, 2020
ರಾತ್ರಿಯೂ ಗುಂಡಿನ ಚಕಮಕಿ ನಡೆದು, ಬೆಳಗಿನ ಜಾವದ ವೇಳೆಗೆ ಓರ್ವ ಉಗ್ರ ಹತನಾದರೆ, ಇನ್ನಿಬ್ಬರು ಉಗ್ರರು ಬೆಳಗ್ಗೆ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ -47 ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಕಾರಣಕ್ಕಾಗಿ ಈ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಕಳೆದ ರಾತ್ರಿಯಿಂದ ಸ್ಥಗಿತಗೊಳಿಸಲಾಗಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ