ಶ್ರೀನಗರ:
ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ಉಗ್ರರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿವೆ.
ಕಾರ್ಯಾಚರಣೆ ನಡೆದ ಪ್ರದೇಶದಲ್ಲಿ 2 ಎಕೆ-47, ಹಾಗೂ ಒಂದು ಪಿಸ್ತೂಲನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತಷ್ಟು ಭಯೋತ್ಪಾದಕರು ಅಡಗಿರುವ ಮಾಹಿತಿ ಇದ್ದು, ಅವರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ