ನವದೆಹಲಿ :
ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಕೊರೋನಾ ಪ್ರಕರಣ ದಾಖಲಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಶನಿವಾರ ದೇಶದಲ್ಲಿ 63,489 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, 944 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ. 25,89,682 ಸೋಂಕಿತರ ಪೈಕಿ 18,62,258 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 6,77,444 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ