ನವದೆಹಲಿ:
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೆ 2,301 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಮಹಾಮಾರಿ ಕೊರೋನಾ ಈ ವರೆಗೂ ಓರ್ವ ವಲಸಿಗ ಸೇರಿದಂತೆ ಒಟ್ಟು 56 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೇ 156 ಜನ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ ದಾರೆ. ಸದ್ಯ 2088 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ ಒಟ್ಟು 124 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಈವರೆಗೆ 10 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/corona-mask.gif)