ನವದೆಹಲಿ :
ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿಭಟನೆ ನಿರತ ರೈತರು ಕೇಂಪು ಕೋಟೆಯ ಮೇಲೇರಿ, ಕೇಂಪು ಕೋಟೆಯ ಗುಂಬಜ್ ಮೇಲೆ ರೈತ ಧ್ವಜವನ್ನ ಹಾರಿಸಿದ್ದಾರೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರೈತರು – ಪೊಲೀಸರು ನಡುವೆ ಘರ್ಷಣೆ ನಡೆದು ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿಪ್ರಹಾರ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ರೈತ ಮೃತಪಟ್ಟಿದ್ದಾರೆ.
#WATCH A protestor hoists a flag from the ramparts of the Red Fort in Delhi#FarmLaws #RepublicDay pic.twitter.com/Mn6oeGLrxJ
— ANI (@ANI) January 26, 2021
ದೆಹಲಿಯ ಮುಕಾರ್ಬಾ ಚೌಕ್ ನಲ್ಲಿ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ , ಜೊತೆಗೆ ಅಶ್ರುವಾಯು ಪ್ರಯೋಗಿಸಲಾಗಿದೆ. ಆದರೂ ಜಗ್ಗದ ರೈತರು ದೆಹಲಿಯ ಹೃದಯ ಭಾಗ ತಲುಪಿದ್ದು, ಕೆಂಪು ಕೋಟೆಗೆ ನುಗ್ಗಿ ರೈತ ಧ್ವಜ ಹಾರಿಸಿದ್ದಾರೆ.
ಕೆಂಪು ಕೋಟೆಯ ಮೇಲಿಂದ ರೈತರನ್ನ ಕೆಳಗಿಳಿಸಲು ಪೊಲೀಸರು ಹರಸಾಹಸ ಪಟ್ಟು ನಂತರ ಪೊಲೀಸರು ಅವರನ್ನು ಕೆಳಗೆ ಇಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ