ಬರೇಲಿ:
ಟ್ರಕ್-ವ್ಯಾನ್ ಮತ್ತು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ಬರೇಲಿಯಲ್ಲಿ ನಡೆದಿದೆ.
ಬುಧವಾರ ಸಂಜೆ ಬಿಸಾಲ್‌ಪುರದಿಂದ ಬರೇಲಿ ಕಡೆಗೆ ಹೋಗುತ್ತಿದ್ದ ಟ್ರಕ್ ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 8 ಜನರು ಸಾವನ್ನಪ್ಪಿದ್ದರೆ, 4 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ 2 ಮಕ್ಕಳು, 4 ಮಹಿಳೆಯರು ಮತ್ತು 2 ಪುರುಷರು ಸಾವನ್ನಪ್ಪಿದ್ದಾರೆ. ಎಲ್ಲರೂ ಒಂದೇ ಕುಟುಂಬದವರು ಎಂದು ಬರೇಲಿ ಕಂಟ್ರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಸರ್ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದಿದ್ದಾರೆ.
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ