2 ಟ್ರಕ್ ಗಳ ನಡುವೆ ಡಿಕ್ಕಿ : 23 ಮಂದಿ ಕಾರ್ಮಿಕರ ಸಾವು!!

ಲಖನೌ:

      2 ಟ್ರಕ್ ಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ ಬೆನ್ನಲ್ಲೇ 23 ಮಂದಿ ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

      ಇಂದು ನಸುಕಿನ 3 -30 ರ ವೇಳೆಗೆ ಅಪಘಾತ ಸಂಭವಿಸಿದ್ದು, ರಾಜಸ್ತಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ ನಲ್ಲಿ ತೆರಳುತ್ತಿದ್ದರು. 

      ಅಪಘಾತದಲ್ಲಿ 23 ಮಂದಿ ಸಾವನ್ನಪ್ಪಿ, ಸುಮಾರು 15ರಿಂದ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ಹೇಳಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap