ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.
ಸ್ನೇಹಿತರ ಜೊತೆಗೂಡಿ ಅತ್ಯಾಚಾರ ಆರೋಪ ಮಾಡಿ ಚಿನ್ಮಯಾನಂದ ಅವರ ಬಳಿ 5 ಕೋಟಿ ರೂ. ಸುಲಿಗೆಗೆ ಯತ್ನಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಆಕೆಯನ್ನು ವಿಶೇಷ ತನಿಖಾ ದಳ(ಎಸ್‍ಐಟಿ) ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಮೇಲೆ ರೇಪ್ : ಬಿಜೆಪಿ ನಾಯಕ ಚಿನ್ಮಯಾನಂದಸ್ವಾಮಿ ಅರೆಸ್ಟ್!!
ಎಸ್ಐಟಿ ಇದಕ್ಕೂ ಮುನ್ನ ಸಂತ್ರಸ್ತ ಯುವತಿಯ ಮೂವರು ಸ್ನೇಹಿತರನ್ನು ಅತ್ಯಾಚಾರ ಘಟನೆಗೆ ಸಂಬಂಧಿಸಿದ ವಿಡಿಯೋ ಕ್ಲಿಪ್ಗಳ ಬಗ್ಗೆ ವಿಚಾರಣೆ ನಡೆಸಲು ಪ್ರಕರಣ ದಾಖಲಿಸಿದೆ. ಕಾನೂನು ವಿದ್ಯಾರ್ಥಿನಿ ಆರೋಪಗಳನ್ನು ನಿರಾಕರಿಸಿದರೂ ಈ ಪ್ರಕರಣದಲ್ಲಿ ತಮ್ಮ ಪಾತ್ರ ಇರುವುದಾಗಿ ಮೂವರು ಒಪ್ಪಿಕೊಂಡಿದ್ದಾರೆ. ಇವರ ಮೇಲೆ ಐಪಿಸಿ ಸೆಕ್ಷನ್ 506, 201, 385, 35 ಹಾಗೂ 67ರ ಅಡಿ ಪ್ರಕರಣಗಳನ್ನು ದಾಖಲಿಸಿ, ಬಂಧಿಸಲಾಗಿದೆ ಎಂದು ಎಸ್ಐಟಿ ಮುಖ್ಯಸ್ಥ ನವೀನ್ ಅರೋರಾ ತಿಳಿಸಿದ್ದಾರೆ.
ಇನ್ನು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು ಶಹಜಹಾನಪುರ ಚೀಫ್ ಜ್ಯೂಡಿಷಿಯಲ್ ಮ್ಯಾಜಿಸ್ಪ್ರೇಟ್ ಕೋರ್ಟ್ ತಿರಸ್ಕರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ