ತುಮಕೂರು:
ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಕೊರೊನಾ ಸೋಂಕಿನ ಭೀತಿಯಿಂದಾಗಿ ನಾವು ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ಮಾಡಲಾಗಲಿಲ್ಲ ಎಂಬ ನೋವು ನಮಗಿದೆ. ಪ್ರಾಣದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಡುತ್ತಿರುವವರನ್ನು ನಾನು ಅಭಿನಂದಿಸುತ್ತೇನೆ ಎಂದರು.
‘ಈ ದೇಶದಲ್ಲಿ ಯಾರು ಅವಕಾಶದಿಂದ ವಂಚಿತರಾಗಬಾರದು, ಈ ದಿಕ್ಕಿನಲ್ಲಿ ನಾವು ಸಾಗಬೇಕಿದೆ. ನಾವಿಂದು ಜಾತಿ ರಹಿತ ಸಮಾಜವನ್ನು ಸ್ವಲ್ಪ ಮಟ್ಟಿಗೆ ಸೃಷ್ಟಿಸಿದ್ದೇವೆ. ಆದರೆ, ದುರದೃಷ್ಟವಶಾತ್ ನಾವು ನಮ್ಮೊಳಗೆ ವರ್ಗ ಸಮಾಜವನ್ನು ಸೃಷ್ಟಿಸಿಕೊಂಡಿದ್ದೇವೆ. ನಮ್ಮಲ್ಲಿ ಮೊದಲು ಶ್ರೀಮಂತ-ಬಡವ, ಮೇಲು-ಕೀಳು ಎನ್ನುವ ಮನೋಭಾವ ಹೋಗಬೇಕಿದೆ’ ಎಂದರು.
ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಫರಿದಾಬೇಗಂ ಮತ್ತಿತರರು ಇದ್ದರು.
ಈ ವೇಳೆ ನಾಗರಿಕ ಪೊಲೀಸ್ ತಂಡ, ಸಶಸ್ತ್ರ ಮೀಸಲು ಪಡೆ, ಕಲ್ಪತರು ಪಡೆಯಿಂದ ಕವಾಯತು ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
