ತುಮಕೂರು:
ಸ್ವಾಮಿ ವಿವೇಕಾನಂದ ಹೆಸರೇ ಒಂದು ಪ್ರೇರಣೆ. ಸ್ವಾಮಿ ವಿವೇಕಾನಂದ ತಮ್ಮ ಭಾಷಣದ ಮೂಲಕ ಹೇಗೆ ಜಗತ್ತಿನ ಗಮನ ಸೆಳೆದರೋ ಅದೇ ರೀತಿ ಬರವಣಿಗೆ ಮೂಲಕವೂ ಕ್ರಾಂತಿ ಮಾಡಿದವರು ಎಂದು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ಶ್ರೀ ಧೀರನಂದಜೀ ಮಹರಾಜ್ ತಿಳಿಸಿದರು.
ಅವರು ನಗರದ ಅಕ್ಷಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 157ನೇ ಜನ್ಮದಿನೋತ್ಸವ ಸಮಾರಂಭದಲ್ಲಿ ಮಾತನಾಡುತ್ತ ಸ್ವಾಮಿ ವಿವೇಕಾನಂದರ ಜೀವನ ಅದೆಷ್ಟೋ ಮಂದಿಯ ಜೀವನವನ್ನೇ ಬದಲಿಸಿದೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ವಿವೇಕಾನಂದರ ಬರಹಗಳು ಸಾಕಷ್ಟು ಪ್ರಭಾವ ಬೀರಿರುವುದು ಮಹಾತ್ಮಗಾಂಧಿ, ಸುಭಾಷ್‍ಚಂದ್ರಬೋಸ್, ಅವರ ಮಾತುಗಳಲ್ಲಿ ಕಂಡುಬರುತ್ತವೆ ಎಂದರು.
ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತನವನ್ನು ಜಾಗೃತಗೊಳಿಸಿ,ಯುವಕರಲ್ಲಿ ನವೋತ್ಸಹವನ್ನು ಕೆರಳಿಸಿ ,ಅವರಲ್ಲಿ ನಮ್ಮ ಸಂಸ್ಕೃತಿ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ್ಯ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು ಎಂದರು.
ಕಾಲೇಜಿನ ಪ್ರಾಶುಂಪಾಲರಾದ ಡಾ|| ಕೆ.ವಿ.ಶ್ರೀನಿವಾಸ್‍ರಾವ್ ಮಾತನಾಡಿ ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವಪೀಳಿಗೆಯ ತಲೆ ಓಳಗೆ ಹೊಕ್ಕರೆ ಭಾರತೀಯ ಸಂಸ್ಕೃತಿಯ ಉಳಿಸಿ ಬೆಳೆಸಬಹುದು ಎಂದರು.
ಈ ಸಂದರ್ಭದಲ್ಲಿ ಅಕಾಡೆಮಿಕ್ ಡೀನ್ ಪ್ರೊ.ಭರತೇಶ್, ಪ್ರೊ.ನಟರಾಜ್‍ಆರಾಧ್ಯ, ಪ್ರೊ.ಈರಪ್ಪ, ಪ್ರೊ.ವರದರಾಜು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ವಾತಿ ಪಾರ್ಥಿಸಿದರೆ, ಪ್ರೊ ಚಂದ್ರಶೇಖರ್ ಸ್ವಾಗತಿಸಿ ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
