ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳ ಹತ್ಯೆ

ನವದೆಹಲಿ :

      ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ.

      ಇಂದು ಮುಂಜಾನೆ 5 ಗಂಟೆ ಸಮಯಕ್ಕೆ ದೆಹಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎನ್ ಕೌಂಟರ್ ಗೆ ಬಲಿಯಾದ ಕ್ರಿಮಿನಲ್ ಗಳು.

      ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದ್ದು, ಇತ್ತೀಚೆಗೆ ದೆಹಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link