ಜಮ್ಮುಕಾಶ್ಮೀರ :
ಗಸ್ತು ತಿರುಗುತ್ತಿದ್ದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಇಂದು ಮಧ್ಯಾಹ್ನ 12;50 ರ ವೇಳೆಗೆ ಪುಲ್ವಾಮ ಜಿಲ್ಲೆಯ ಪ್ಯಾಂಪೊರ್ ಬೈಪಾಸ್ ಬಳಿ ಗಸ್ತು ತಿರುಗುತ್ತಿದ್ದ ತಂಡದ ಮೇಲೆ ಉಗ್ರರು ಮನಸೋಚ್ಛೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ.
#UPDATE Of the five CRPF jawans, who were injured after terrorists fired upon the Force's road opening party (ROP), two jawans lost their lives. More details awaited. #JammuAndKashmir https://t.co/zIZ5pHKXw2
— ANI (@ANI) October 5, 2020
ಘರ್ಷಣೆಯಲ್ಲಿ ಐವರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಇಬ್ಬರು ಯೋಧರು ಮೃತಪಟ್ಟಿದ್ದಾರೆ.
ಇದೀಗ ಸ್ಥಳದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭದ್ರತಾ ಪಡೆಗಳಿಂದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ