ಜಮ್ಮು-ಕಾಶ್ಮೀರ:

ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಅಚಾಬಲ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರದೇಶದಲ್ಲಿ ಇನ್ನೂ ಮೂವರು ಉಗ್ರರು ಅಡಗಿದ್ದು, ಎನ್ ಕೌಂಟರ್ ಮುಂದುವರಿದಿದೆ. ಸುತ್ತ ಮುತ್ತಲಿನ ಪ್ರದೇಶವನ್ನು ಸುತ್ತುವರಿದಿದ್ದು, ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







