ಜಮ್ಮು-ಕಾಶ್ಮೀರ:
ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಉಗ್ರರು ಹತ್ಯೆಗೀಡಾಗಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಝೈನಾಪೋರಾ ಗ್ರಾಮದ ಮೆಲ್ ಹೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಧ ಕಾರ್ಯಾಚರಣೆಯನ್ನು ಆರಂಭಿಸಿತ್ತು ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಭಾರತೀಯ ಸೇನೆಯೂ ಸಹ ಉಗ್ರರ ಕಡೆಗೆ ಗುಂಡಿನ ಸುರಿಮಳೆ ನಡೆಸಿತು. ಈ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಸೇರಿದಂತೆ ಇಡೀ ಜಗತ್ತು ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿದ್ದರೆ, ಪಾಕಿಸ್ತಾನ ಉಗ್ರರನ್ನು ರಫ್ತು ಮಾಡುವುದರಲ್ಲಿ ತಲ್ಲೀನವಾಗಿದೆ ಎಂದು ಭಾರತೀಯ ಸೇನಾಪಡೆಯ ಮುಖ್ಯಸ್ಥ ನರಾವಣೆ ಆಕ್ರೋಶವ್ಯಕ್ತಪಡಿಸಿದ್ದನ್ನು ನೆನಪಿಸಿಕೊಳ್ಳಬಹುದು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ