ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಮಂಗಳವಾರ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
Jammu & Kashmir: Encounter underway between security forces and terrorists in Tral. More details awaited. (Visuals deferred by unspecified time) pic.twitter.com/e8lu8WCivb
— ANI (@ANI) March 5, 2019
ಎನ್‍ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್(ಎಚ್‍ಎಮ್)ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
ಇಂದು ಬೆಳಗಿನ ಜಾವ ಪುಲ್ವಾಮಾದ ತ್ರಾಲ್‍ನ ರೇಶಿ ಮೊಹಲ್ಲಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಭಯೋತ್ಪಾದಕರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭಾರತೀಯ ಯೋಧರು ಮಾಹಿತಿ ಪಡೆದ ಸೇನಾಪಡೆ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಭಯೋತ್ಪಾದಕರು ಏಕಾಏಕಿ ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಸೇನಾಪಡೆಗಳು ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಭಯೋತ್ಪಾದಕರ ಹೆಡೆಮುರಿಕಟ್ಟಲಾಗಿದೆ.
ಹತರಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಮೂರರಿಂದ ನಾಲ್ಕು ಉಗ್ರರು ಕಟ್ಟಡದಲ್ಲಿ ಅವಿತಿದ್ದ ಶಂಕೆಯಿದ್ದು ಪರಾರಿಯಾಗಿರಬಹುದಾದ ಇತರ ಭಯೋತ್ಪಾದಕರ ಪತ್ತೆಗೆ ಕಾಶ್ಮೀರ ಪೊಲೀಸರು ಮತ್ತು CRPF ಸೈನಿಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








