ದೆಹಲಿ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರ ಬದಲಿಗೆ ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಮಂಡಿಸಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿ ಮನರಂಜನಾ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಪ್ರಮುಖವಾಗಿ ಸಿನಿಮಾ ಉದ್ಯಮಕ್ಕೆ ಸಿಹಿ ಸುದ್ದಿ ನೀಡಿದೆ.
ಸಿನಿಮಾ ಚಿತ್ರೀಕರಣ ಅನುಮತಿಗೆ ಏಕ ಗವಾಕ್ಷಿ ಕಾರ್ಯಕ್ರಮ ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದುವರೆಗೂ ವಿದೇಶಿಗರಿಗೆ ಮಾತ್ರ ಇದ್ದ ಅನುಕೂಲವನ್ನು ಇದೀಗ ದೇಶೀಯ ಚಿತ್ರ ನಿರ್ಮಾಣಕ್ಕೂ ವಿಸ್ತರಿಸಿದೆ. ಇದರಿಂದ ಬಾಲಿವುಡ್ ಸೇರಿದಂತೆ ಎಲ್ಲಾ ಪ್ರಾದೇಶಿಕ ಚಿತ್ರರಂಗಕ್ಕೂ ಅನುಕೂಲವಾಗಲಿದ್ದು, ಭಾರತೀಯ ಚಿತ್ರರಂಗದ ಸಂತೋಷವನ್ನು ಹೆಚ್ಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
