ಆದಾಯ ತೆರಿಗೆದಾರರಿಗೆ ಬಿಗ್ ಗಿಫ್ಟ್!!

ದೆಹಲಿ:

     ಕೇಂದ್ರ ಹಣಕಾಸು ಸಚಿವ ಪಿಯೂಷ್​ ಗೋಯಲ್​ ಅವರು ಇಂದು 16ನೇ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು​ ಮಂಡನೆ ಮಾಡಿದ್ದಾರೆ. 

      ವಿತ್ತ ಸಚಿವ ಅರುಣ್​ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್​ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್​ ಅನ್ನು ಮಂಡಿಸಿದ್ದಾರೆ.

ಕೇಂದ್ರ ಬಜೆಟ್ 2019 : ಅಪ್‍ಡೇಟ್ಸ್!!!

      ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು ಎನ್ನುವ ಆಸೆಗೆ ಕೇಂದ್ರ ಸರಕಾರ ಬಜೆಟ್ ನಲ್ಲಿ ಅಸ್ತು ಎಂದಿದೆ. ಕೇಂದ್ರ ಸರಕಾರದ ಈ ಹೊಸ ಘೋಷಣೆಯಿಂದಾಗಿ 3 ಕೋಟಿ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲಿದೆ.

      ಅಷ್ಟೇ ಅಲ್ಲದೆ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ.  ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಸ್ಟ್ಯಾಂಡರ್ಡ್ ಡಿಡಕ್ಷನ್ 40 ಸಾವಿರದಿಂದ 50 ಸಾವಿರಕ್ಕೆ ಏರಿಕೆ.
 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap