ದೆಹಲಿ:
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಪ್ರತಿ ಹಳ್ಳಿಗೂ ಅಂತರ್ಜಾಲ ಸೌಲಭ್ಯ ನೀಡಲು ಮುಂದಾಗಿದೆ.
ದೇಶದ ಪ್ರತಿ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳಲ್ಲೂ ಇಂಟರ್‌ನೆಟ್ ಸೇವೆ ಒದಗಿಸುವ ಭಾರತ್ ನೆಟ್ ಯೋಜನೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಸಾರ್ವತ್ರಿಕ ಸೇವೆಗಳ ಭಾದ್ಯತೆ ನಿಧಿಯನ್ನು ಬಳಸಿಕೊಂಡು ಭಾರತ್ ನೆಟ್‌ಗೆ ವೇಗ ಒದಗಿಸಲಾಗುವುದು. ಇದನ್ನು ಖಾಸಗಿ ಸಹಭಾಗಿತ್ವದೊಂದಿಗೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನದ ಅಡಿಯಲ್ಲಿ ಈಗಾಗಲೇ ಜಾರಿಗೆ ತರಲಾಗಿರುವ ಭಾರತ್‌ನೆಟ್ ಯೋಜನೆಗೆ ‘ಜಾಗತಿಕ ಸೇವಾ ಬಾಧ್ಯತಾ ಅನುದಾನ’ದ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ