ದೆಹಲಿ :
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು 300 ಕಿ.ಮೀ.ನಷ್ಟು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಮೊದಲ ಮಹಿಳಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಅಭಿವೃದ್ಧಿಗೆ ಸಾರಿಗೆ ಕ್ಷೇತ್ರದತ್ತ ಒತ್ತು ನೀಡುತ್ತಿದ್ದು,ನೂತನ ಸಾರಿಗೆ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ.
ದೇಶದಲ್ಲಿ ಈವರೆಗೂ 657 ಕಿ.ಮೀ ಮೆಟ್ರೋ ಸಾರಿಗೆ ಇದೆ. ಕಳೆದ ವರ್ಷ 300 ಕಿ. ಮೀ. ಮೆಟ್ರೋ ಮಾರ್ಗಕ್ಕೆ ಅನುಮೋದನೆ ನೀಡಲಾಗಿದ್ದು, ನಗರ ಪ್ರದೇಶಗಳಲ್ಲಿ ಮೆಟ್ರೋ ರೈಲು ಮತ್ತು ಹೊರ ವರ್ತುಲ ರೈಲುಗಳ ಸಂಚಾರಕ್ಕೆ ಒತ್ತು ನೀಡಲಾಗಿದೆ.
ಸರಕು ಸಾಗಣೆ ರೈಲಿಗೆ ಪ್ರತ್ಯೇಕ ಟ್ರ್ಯಾಕ್ ನಿರ್ಮಾಣ ಮಾಡಲಾಗುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಮೆಟ್ರೋ ರೈಲು ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ ಎಂದ ಅವರು ಇಡೀ ದೇಶದಲ್ಲಿ ಪ್ರಯಾಣಿಸಲು ಯೂನಿವರ್ಸಲ್ ಸಿಂಗಲ್ ಕಾರ್ಡ್ ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ