ರೈತರ ಬ್ಯಾಂಕ್ ಖಾತೆಗೆ 6ಸಾವಿರ ರೂ.!!!

ದೆಹಲಿ:

      ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರ ಬದಲಿಗೆ ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಮಂಡಿಸಿದ್ದಾರೆ. 

    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ, ದೇಶದಲ್ಲಿ 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿಯುಳ್ಳ ರೈತರ ಬ್ಯಾಂಕ್​ ಖಾತೆಗಳಿಗೆ 6 ಸಾವಿರ ನಗದು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಇನ್ನು ಡಿಸೆಂಬರ್ 2018ರಿಂದಲೇ ಈ ಯೋಜನೆ ಅನ್ವಯವಾಗಲಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

       ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಹಣ ರೈತರ ಖಾತೆಗಳಿಗೆ ಜಮೆ ಆಗಲಿದೆ. ಇದರಿಂದ 12 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 75,000 ಕೋಟಿ ಮೀಸಲಿಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2019 : ಅಪ್‍ಡೇಟ್ಸ್!!!

      ಜೆಕೆ ಅಗ್ರಿ ಜೆನೆಟಿಕ್ಸ್ ಶೇ 5.67, ಕೆಆರ್‌ಬಿಎಲ್ ಶೇ 5.02, ಅಗ್ರಿ ಟೆಕ್ ಇಂಡಿಯಾ ಶೇ 4.97, ವೈಟ್ ಆರ್ಗಾನಿಕ್ ಆಗ್ರೋ ಶೇ 4.83ರಷ್ಟು ಷೇರುಗಳ ಏರಿಕೆ ಕಂಡಿವೆ.

       ರೈತರ ಹಿತಕಾಯುವ ಅಂಶಗಳನ್ನು ಮಧ್ಯಂತರ ಬಜೆಟ್​ ಒಳಗೊಂಡಿರುತ್ತದೆ ಎಂಬ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ. 

      ವಿತ್ತ ಸಚಿವ ಅರುಣ್​ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್​ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್​ ಅನ್ನು ಮಂಡಿಸಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap