ಉನ್ನಾವೋ ಅತ್ಯಾಚಾರ ಪ್ರಕರಣ : ಮಾಜಿ BJP ಶಾಸಕನಿಗೆ ಜೀವಾವಧಿ ಶಿಕ್ಷೆ!!

ದೆಹಲಿ:

      ಉನ್ನಾವೋ ಅತ್ಯಾಚಾರ ಪ್ರರಕಣದ ಅಪರಾಧಿ ಕುಲ್ದೀಪ್ ಸಿಂಗ್ ಸೆಂಗಾರ್ ಗೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಜೀವಿತಾವಧಿ ಶಿಕ್ಷೆ ವಿಧಿಸಿದೆ.

      ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಉಚ್ಛಾಟಿತ ಶಾಸಕ ಕುಲ್ ದೀಪ್ ಸೆಂಗರ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. ಈ ಪ್ರಕರಣ ಸಂಬಂಧ ಸಿಬಿಐ ಕೋರ್ಟ್ ದೆಹಲಿ ಹೈಕೋರ್ಟ್ ನಲ್ಲಿ ಜೀವಾವಧಿ ಶಿಕ್ಷೆ ನೀಡುವಂತೆ ಮನವಿ ಮಾಡಿತ್ತು. ಇಂತಹ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇದೀಗ ತೀರ್ಪು ನೀಡಿದ್ದು, ಬಿಜೆಪಿಯ ಉಚ್ಛಾಟಿತ ಶಾಸಕ ಕುಲ್ ದೀಪ್ ಸೆಂಗರ್ ಗೆ ಜೀವಾವಧಿ ಶಿಕ್ಷೆ, ಜೊತೆಗೆ ಪೀಡಿತೆ ಕುಟುಂಬಕ್ಕೆ 25 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಹೇಳಿದೆ. 

ಉನ್ನಾವೋ ರೇಪ್ ಕೇಸ್ : ಮಾಜಿ ಬಿಜೆಪಿ ಶಾಸಕನೇ ಅಪರಾಧಿ!!

     ಅಲ್ಲದೇ ಸಂತ್ರಸ್ತೆ ಮೇಲೆ ಬಂದಿರುವ ಬೆದರಿಕೆ ಕರೆ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದೆ. ಕುಟುಂಬಕ್ಕೆ ಭದ್ರತೆ ನೀಡುವಂತೆ ಸೂಚಿಸಲಾಗಿದೆ. ಸುರಕ್ಷಿತ ಮನೆ ನೀಡುವಂತೆ ಸಿಬಿಐಗೆ ಕೋರ್ಟ್ ಆದೇಶಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

      

Recent Articles

spot_img

Related Stories

Share via
Copy link
Powered by Social Snap