ನವದೆಹಲಿ:
ಉತ್ತರ ಪ್ರದೇಶದ ಉನ್ನಾವೋ ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Set on fire, Unnao rape victim died due to cardiac arrest at Safdarjung hospital
Read @ANI story | https://t.co/gQg4HI4Ki2 pic.twitter.com/7IoIjDtewh
— ANI Digital (@ani_digital) December 6, 2019
ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಆರು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆದಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.
Delhi: Visuals from outside Safdarjung Hospital where Unnao rape victim died due to a cardiac arrest, earlier tonight. She was set ablaze in Bihar area of Unnao on December 5 and was later airlifted to Delhi, to be admitted here at the hospital. pic.twitter.com/I2qMo5EGWm
— ANI (@ANI) December 6, 2019
ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 11:40ಕ್ಕೆ ಹೃದಯಾಘಾತದಿಂದ 23 ವರ್ಷದ ಯುವತಿ ಮೃತಪಟ್ಟಿದ್ದಾರೆ.
ಘಟನೆಯಿಂದ ಶೇ.90ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಬದುಕುಳಿಯುವುದು ಕಷ್ಟ ಎಂದು ವೈದ್ಯರು ಮೊದಲೇ ತಿಳಿಸಿದ್ದರು. ನಿನ್ನೆ ಹೈದ್ರಾಬಾದ್ ಎನ್ಕೌಂಟರ್ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/ELIUW5LU8AAyZw2.gif)